Shivaraj Kumar: ಅಕ್ಟೋಬರ್’ನಲ್ಲಿ ಶಿವಣ್ಣನ ಘೋಸ್ಟ್ ಸಿನಿಮಾ ರಿಲೀಸ್..!

ಶ್ರೀನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivaraj Kumar) ನಟನೆಯ ಘೋಸ್ಟ್ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ದಸರಾ ಉಡುಗೊರೆಯಾಗಿ ಈ ಸಿನಿಮಾವನ್ನು ನೀಡುತ್ತಿದ್ದು, ಅಕ್ಟೋಬರ್ 19ರಂದು ವಿಶ್ವದಾದ್ಯಂತ ಘೋಸ್ಟ್ ಸಿನಿಮಾವನ್ನು ರಿಲೀಸ್ (Release) ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸಂದೇಶ್ ನಾಗರಾಜ್ ಸಿನಿಮಾವನ್ನು ಅರ್ಪಿಸಿದ್ದಾರೆ. ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನ ಚಿತ್ರಕ್ಕಿದೆ. ಮೊನ್ನೆಯಷ್ಟೇ ‘ಘೋಸ್ಟ್’ (Ghost) ಚಿತ್ರದ ಚಿತ್ರೀಕರಣ (Shooting) ಮುಕ್ತಾಯವಾಗಿದೆ.
ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು (Complete), ಕುಂಬಳಕಾಯಿ ಒಡೆಯಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ

ನಿರ್ದೇಶಕ ಶ್ರೀನಿ ಬೀರ್ ಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ (Srini) ಬೀರ್ ಬಲ್ ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ ಬೀರ್ ಬಲ್ ಪಾತ್ರದಲ್ಲಿ ಅಭಿನಯಿಸಿರುವುದು, ಬೀರ್ ಬಲ್ ಭಾಗ 2 ಬರಬಹುದಾ ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ಘೋಸ್ಟ್ ಫಸ್ಟ್ ಲುಕ್, BIG DADDY ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ. ಅಲ್ಲದೇ ನಿರ್ದೇಶಕ ಶ್ರೀನಿ ಅವರ ಬಗೆ ಬಗೆಯ ಪ್ರಯತ್ನಗಳನ್ನು ಸ್ವತಃ ಶಿವರಾಜ್ ಕುಮಾರ್ ಅವರೇ ಕೊಂಡಾಡಿದ್ದಾರೆ. ಹೀಗಾಗಿ ಸಿನಿಮಾ ನಿರೀಕ್ಷೆ ಮೂಡಿಸಿದೆ. ನಾಯಕನಾಗಿ ಶಿವರಾಜಕುಮಾರ್ ನಟಿಸಿದ್ದರೆ, ಅನುಪಮ್ ಖೇರ್ (Anupam Kher), ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Loading

Leave a Reply

Your email address will not be published. Required fields are marked *