ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್..!

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡನ (Yogesh Gowda) ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಜನಪ್ರತಿನಿಧಿಗಳ ನ್ಯಾಯಾಲಯ (Representatives Court) ಮತ್ತೆ ಶಾಕ್ ಕೊಟ್ಟಿದೆ. ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡನ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿನಯ್ ಕುಲಕರ್ಣಿ ಧಾರವಾಡ (Dharwad) ಜಿಲ್ಲೆ ಭೇಟಿಗೆ ಕೋರ್ಟ್ ಅನುಮತಿ ನಿರಾಕರಿಸಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ (Hubballi-Dharwad Mayoral Elections) ಜೂನ್ 20 ರಂದು ಧಾರವಾಡಕ್ಕೆ ತೆರಳಿ ಮತದಾನ ಮಾಡುವುದಕ್ಕೆ ಅನುಮತಿ ಕೋರಿದ್ದರು. ಆದರೆ ಕೋರ್ಟ್ ಅನುಮತಿ ನಿರಾಕರಿಸಿದೆ. ಈ ಹಿಂದೆಯೂ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿತ್ತು.

ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು, ಆದ್ರೆ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಆದ್ದರಿಂದ ಅನುಮತಿ ನೀಡದಂತೆ CBI ಎಸ್‌ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶ ಬಿ. ಜಯಂತಕುಮಾರ್ ಅನುಮತಿ ನಿರಾಕರಿಸಿ ಆದೇಶ ಪ್ರಕಟಿಸಿದರು

ಅರ್ಜಿ ಹಾಕಿದ್ದು ಯಾಕೆ?
ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದ ವಿನಯ್ ಕುಲಕರ್ಣಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.

Loading

Leave a Reply

Your email address will not be published. Required fields are marked *