ಕೊಲ್ಕತ್ತಾ: ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನಾಯಕರಿಗೆ ಭಾರೀ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಬೇಕಿದ್ದರೆ 300 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿ ನಾವು ಯಾವ ಪಕ್ಷದ ಜೊತೆಗೂ ಕೈಜೋಡಿಸುವುದಿಲ್ಲ. ಯಾವ ಪಕ್ಷದ ಜೊತೆಗೂ TMC ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಉಲ್ಟಾ ಹೊಡೆದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಮಾಡಲಾಗಿದೆ.
ಇಂಡಿಯಾ ಹೆಸರಿನ ಮೈತ್ರಿಕೂಟದಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಮಮತಾ ಬ್ಯಾನರ್ಜಿ ಕಾಂಗ್ರೆಸ್ ನಾಯಕರಿಗೆ ಭಾರೀ ಶಾಕ್ ನೀಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೈತ್ರಿ ಇಲ್ಲ ಎಂದಿದ್ದಾರೆ. ಹೌದು ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಹಂಚಿಕೆ ಬಗ್ಗೆ ಗೊಂದಲ ಉಂಟಾಗಿದ್ದು, ಇದೀಗ ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಲ್ಟಾ ಹೊಡೆದಿದ್ದಾರೆ.