ಗೋಲ್ಡ್ ಪ್ರಿಯರಿಗೆ ಶಾಕ್ – ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ

ಬೆಂಗಳೂರು:- ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಏರಿಕೆ ಕಾಣತೊಡಗಿದೆ. ಅಮೆರಿಕದ ಆರ್ಥಿಕತೆಯ ವಿವಿಧ ಅಂಶಗಳು ಸದ್ಯದಲ್ಲೇ ಬಹಿರಂಗಗೊಳ್ಳಲಿದ್ದು, ಮುನ್ನೆಚ್ಚರಿಕೆಯಾಗಿ ಹೂಡಿಕೆದಾರರು ಚಿನ್ನದ ಮೇಲೆ ಹಣ ಇರಿಸಿದ್ದಾರೆ. ಒಂದು ವೇಳೆ ಅಮೆರಿಕದ ಹಣದುಬ್ಬರ ಗಣನೀಯವಾಗಿ ಇಳಿಕೆಯಾದರೆ ಅಲ್ಲಿ ಬಡ್ಡಿದರವನ್ನೂ ಇಳಿಸಬಹುದು.

ಆಗ ಚಿನ್ನದ ಬೆಲೆ ಹೆಚ್ಚತೊಡಗಬಹುದು ಎಂಬ ನಿರೀಕ್ಷೆಯಲ್ಲಿ ಬಹಳ ಮಂದಿ ಈಗಿಂದಲೇ ಚಿನ್ನ ಖರೀದಿಸತೊಡಗಿದ್ದಾರೆ. ಇದರ ಪರಿಣಾಮ ಭಾರತೀಯ ಚಿನಿವಾರಪೇಟೆಯ ಮೇಲೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,625 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 28ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 762.50 ರೂ

Loading

Leave a Reply

Your email address will not be published. Required fields are marked *