ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ಅಂತೂ ಇಂತೂ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಲಿದೆ. ಮೇ.20ರಂದು 12.30ಕ್ಕೆ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ( Siddaramaiah ), ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ( DK Shivakumar ) ಪದಗ್ರಹಣ ಮಾಡಲಿದ್ದಾರೆ.

 

ಈ ಸಂಬಂಧ ಎಐಸಿಸಿ ಅಧ್ಯಕ್ಷರಿಂದ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಮೇ.202ರಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ಒಟ್ಟಾರೆಯಾಗಿ ಕೆಲ ದಿನಗಳಿಂದ ನಡೆಯುತ್ತಿದ್ದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಸಂಜೆ 7ಕ್ಕೆ ಅಧಿಕೃತ ಘೋಷಣೆಗಾಗಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವುದಾಗಿ ತಿಳಿದು ಬಂದಿದೆ. ಈ ಸಿಎಲ್ ಪಿ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.

 

Loading

Leave a Reply

Your email address will not be published. Required fields are marked *