ಚಿಕ್ಕಬಳ್ಳಾಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ರೈತರ ಬದುಕಿಗೆ ಗ್ಯಾರಂಟಿ ಇಲ್ಲ. ಕೆಲವು ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಈಗಾಗಲೇ ಪಂಜಾಬ್ ರಾಜ್ಯ ದಿವಾಳಿ ಆಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆಗೆ ಹೋಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಶ್ರಮದ ಹಣವನ್ನು ಸೋಮಾರಿಗಳಿಗೆ ನೀಡುತ್ತಿದೆ. ಉಚಿತ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.