ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿಯಾದರು. ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಉಡುಗೊರೆಯನ್ನು ಪ್ರಧಾನಿ ಮೋದಿ ಕುತೂಹಲದಿಂದ ನೋಡಿದರು.
ಪರಸ್ಪರರು ಕುಶಲೋಪರಿ ವಿಚಾರಿಸಿದರು. ಬಳಿಕ ಸಿಎಂ ಹಾಗೂ ಪಿಎಂ ಕೆಲಹೊತ್ತು ಮಾತುಕತೆ ನಡೆಸಿದರು. ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲೇ ತಮ್ಮ 76ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಸಿಎಂಗೆ ಜನ್ಮದಿನದ ಶುಭಾಶಯ ತಿಳಿಸಿದರು.