ಬೆಂಗಳೂರು : ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ.
ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಕನ್ಫರ್ಮ್ ಆಗಿದೆ ಎಂದರು.
ನಾವೆಲ್ಲಾ ಸಿದ್ದರಾಮಯ್ಯಗೆ ಶುಭಾಶಯ ತಿಳಿಸಿದ್ದೇವೆ. ಸಿದ್ದರಾಮಯ್ಯ ಕೂಡ ತುಂಬಾ ಖುಷಿಯಾಗಿದ್ದಾರೆ.ಡಿ.ಕೆ. ಶಿವಕುಮಾರ್ ಕೂಡ ಹಲವು ನಾಯಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.