ಇಸ್ಲಾಮಾಬಾದ್: ಮೋಟಾರ್ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಸಿಖ್ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪೇಶಾವರದ ಕಕ್ಷಾಲ್ ನಿವಾಸಿ ಮನಮೋಹನ್ ಸಿಂಗ್ ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತ ಮನಮೋಹನ್ ಸಿಂಗ್ ಕೆಲಸ ಮುಗಿಸಿಕೊಂಡು ಗುಲ್ದಾರ್ ಚೌಕ್ ಬಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಡಿಎಸ್ ಪಿ ಅಬ್ದುಲ್ ಸಲಾಂ ಖಲಿದ್ ತಿಳಿಸಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಘಟನೆಯು ಉದ್ದೇಶಿತ ಹತ್ಯೆಯೇ, ಇಲ್ಲವೇ ಎಂಬುದನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಖಲಿದ್ ತಿಳಿಸಿದ್ದಾರೆ.