ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದು ಬಳಿಕ ಪೊಲೀಸರಿಗೆ ಶರಣಾದ ಘಟನೆ ಗೌರಿಬಿದನೂರಿನ ಅಲಕಾಪುರದಲ್ಲಿ ನಡೆದಿದೆ. ಶಹನಾಜ್ ಕೊಲೆಯಾದ ದುರ್ದೈವಿ, ಕೊಲೆಗೈದ ಆರೋಪಿಯನ್ನು ಅಂಜುಂ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಲಾರಿ ಚಾಲಕನಾಗಿದ್ದು ಆತ ಮನೆಯಲ್ಲಿ ಇಲ್ಲದಿರುವಾಗ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಸಂಚು ರೂಪಿಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿ ಪತ್ನಿಯನ್ನು ಗ್ರಾಮದ ಹೊರ ವಲಯಕ್ಕೆ ಕರೆದೊಯ್ದು ಚಾಕು ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತ ದೇಹವನ್ನು ನಡು ರಸ್ತೆಯಲ್ಲೇ ಬಿಟ್ಟು ಗೌರಿಬಿದನೂರು ಗ್ರಾಮಾಂತರ ಪೊಲೀಸ್ (Police) ಠಾಣೆಗೆ ಬಂದು ಶರಣಾಗಿದ್ದಾನೆ. ವಿಚಾರಣೆ ವೇಳೆ ಪೊಲೀಸರ ಬಳಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕೊಲೆಗೈದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗೌರಿಬಿದನೂರು ಪೊಲೀಸರು ಆ ಠಾಣೆ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ