ವಿದೇಶದಲ್ಲಿ ಕುಳಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹರಿಹಾಯ್ದರು.
ಇನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತಾ ಈಗ ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡ್ತಿದ್ದಾರೆ. ಸರ್ಕಾರ ಅಭದ್ರಗೊಳಿಸ್ತಿರೋ ತಂತ್ರದ ಬಗ್ಗೆ ನಮಗೂ ಮಾಹಿತಿಯಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕಳೆದ ವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಿತ್ತು. ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಸಭ್ಯ ವರ್ತನೆ ತೋರಿದ ಆರೋಪದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ವೇಳೆ ಅಮಾನತುಗೊಂಡ ಶಾಸಕರನ್ನು ಸದನದಿಂದ ಹೊರ ಹಾಕುವಾಗ ಹೈಡ್ರಾಮಾ ನಡೆದಿತ್ತು. ಸ್ಪೀಕರ್ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿಗೆ ಜೆಡಿಎಸ್ ಪಕ್ಷ ಕೂಡ ಬೆಂಬಲ ಸೂಚಿಸಿತ್ತು. ಕೊನೆಗೆ ಬಿಜೆಪಿ, ಜೆಡಿಎಸ್ ನಾಯಕರು ಒಟ್ಟಿಗೆ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು.
ಬಿಜೆಪಿ ಹೋರಾಟಕ್ಕೆ ಜೆಡಿಎಸ್ ಬೆಂಬಲ ಸೂಚಿಸಿದ ಬಳಿಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ. ಹೆಚ್ಡಿಕೆ ಸಿಂಗಾಪುರದಲ್ಲಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Loading

Leave a Reply

Your email address will not be published. Required fields are marked *