ಸಿದ್ದು ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿಯೊಂದು ವಸ್ತುವಿನ ದರವು ಹೆಚ್ಚುತ್ತಿದೆ. ಇದರಿಂದ ಗೃಹಿಣಿಯರು ಕಂಗಾಲಾಗಿದ್ದು ದಿನಸಿ ಸಾಮಾನುಗಳನ್ನು ಖರೀದಿಸಲು ಹಿಂದು ಮುಂದು ನೋಡುವಂತಾಗಿದೆ.
ಅದರಲ್ಲೂ ತರಕಾರ ಬೆಲೆ ಗಗನಕ್ಕೇರಿದೆ. ಯಾವುದೇ ತರಕಾರಿ ತೆಗೆದುಕೊಳ್ಳಲು ಹೋದರು ದರ ಕೇಳಿಯೇ ಹಿಂದೆ ಸರಿಯುವ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ವಾರವಷ್ಟೇ ಕೆಜಿಗೆ 20 ರೂಪಾಯಿ ಇದ್ದ ಟೊಮ್ಯಾಟೋ ಧರ ಏಕಾಏಕಿ ನೂರರ ಗಡಿ ದಾಟಿರುವುದರಿಂದ ಗೃಹಿಣಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನನಿತ್ಯದ ಅಡುಗೆಯಲ್ಲಿ ಟೊಮ್ಯಾಟೋ ಬೇಕೆ ಬೇಕು ಅನ್ನುವಷ್ಟರ ಮಟ್ಟಿಗೆ ಟೊಮ್ಯಾಟೋ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿದೆ. ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಸೇರಿದಂತೆ ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಒಂದು ಕೆ.ಜಿ ಟೊಮೆಟೋಗೆ ಹಾಪ್ ಕಾಮ್ಸ್ ನಲ್ಲಿ 110 ರೂ., ಆನ್ ಲೈನ್ ಶಾಪಿಂಗ್ ನಲ್ಲಿ 120 ರೂ. ಆಗಿದೆ. ಹೀಗಾಗಿ ಮಹಿಳೆಯರು ಯಾವ ರೀತಿ ಅಡುಗೆ ಮಾಡುವುದು ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಉತ್ಪಾದನೆ ಕೊರತೆ, ತೀವ್ರವಾದ ಬಿಸಿಲು ಮತ್ತು ಮುಂಗಾರು ಆಗಮನ ವಿಳಂಬವಾಗಿದ್ದರಿಂದ ಟೊಮೆಟೋ ದರದಲ್ಲಿ ಏರಿಕೆಯಾಗಿದೆ ಎಂದು ರೈತರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕಳೆದೆರಡು ದಿನಗಳಲ್ಲಿ ಟೊಮೆಟೋ ಬೆಲೆ ಹೆಚ್ಚಳವಾಗಿದ್ದು ಇದರಿಂದ ಮಹಿಳೆಯರು ಕಂಗಾಲಾಗಿದ್ದಾರೆ.