ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ಕೊಲೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು ;- ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಕೋರ್ಟ್ ಪೀಠವು ಆರೋಪಿಗೆ ಜಾಮೀನು ನಿರಾಕರಿಸಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಈ ಆದೇಶ ಮಾಡಿದೆ.
ತಕ್ಷಣಕ್ಕೆ ಉಂಟಾದ ಜಗಳದಿಂದ ಕೊಲೆ ಘಟನೆ ನಡೆದಿದೆ.
ಮೃತನನ್ನು ಕೊಲೆ ಮಾಡುವ ಉದ್ದೇಶ ಆರೋಪಿಗೆ ಇರಲಿಲ್ಲ ಎಂಬುದು ಅರ್ಜಿದಾರರ ಪರ ವಕೀಲರ ವಾದವಾಗಿತ್ತು. ತಿರಸ್ಕರಿಸಿದ ಹೈಕೋರ್ಟ್, ಆರೋಪಿಯು ಕೊಲೆ ಮಾಡಿ ಫೇಮಸ್ ಆಗಬೇಕೆಂದು ಪದೇ ಪದೇ ಹೇಳುತ್ತಿದ್ದ. ಮೃತ ಯುವಕನ ತಾಯಿ ಹಾಗೂ ಇತರ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ, ಆರೋಪಿಯು ಯುವಕನ ಕುತ್ತಿಗೆಗೆ ಡ್ರ್ಯಾಗರ್‌ನಿಂದ ಚುಚ್ಚಿದ್ದಾನೆ. ನಂತರ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗಲೂ ಬೆನ್ನಟ್ಟಿ ಮತ್ತೆ ಕುತ್ತಿಗೆ ಮತ್ತು ಹೊಟ್ಟೆಗೆ ಡ್ಯಾಗರ್‌ನಿಂದ ಇರಿದಿದ್ದಾನೆ ಎಂದು ಪೀಠ ಹೇಳಿದೆ.
ಅಲ್ಲದೆ, ಶವಪರೀಕ್ಷೆಯ ವರದಿ ಪ್ರಕಾರ, ಮೃತದೇಹದ ಮೇಲೆ ಏಳು ಗಂಭೀರ ಗಾಯಗಳಿವೆ. ಆಘಾತ ಮತ್ತು ತೀವ್ರ ರಕ್ತಸ್ರಾವದಿಂದ ವ್ಯಕ್ತಿಯ ಸಾವಾಗಿದೆ. ಈ ಹಂತದಲ್ಲಿ ಉಂಟಾದ ಹಠಾತ್ ಜಗಳದಿಂದ ಘಟನೆ ನಡೆದಿದೆ ಹಾಗೂ ಕೊಲೆ ಮಾಡುವ ಉದ್ದೇಶವು ಆರೋಪಿಗೆ ಇರಲಿಲ್ಲ ಎಂಬುದನ್ನು ಹೇಳಲಾಗದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Loading

Leave a Reply

Your email address will not be published. Required fields are marked *