ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಮುಂಬೈನಲ್ಲಿ ಐಎನ್ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.
ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.