ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಜೈಪುರದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಜತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು. ಮಾಜಿ ಕಾಂಗ್ರೆಸ್ ಅಧ್ಯಕ್ಷರು ರಾಜಸ್ಥಾನದಿಂದ ಸಂಸತ್ತಿನ ಮೇಲ್ಮನೆಯಲ್ಲಿ ಕಾಂಗ್ರೆಸ್ ಅನ್ನು ಪ್ರತಿನಿಧಿಸುತ್ತಾರೆ.
1998 ಮತ್ತು 2022 ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ.