ಬೆಂಗಳೂರು;- ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ. ರಾಜ್ಯ ಸರ್ಕಾರ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲೇ ‘ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಪುನೀತ್ ಹೃದಯ ಜ್ಯೋತಿ’ ಯೋಜನೆ ಘೋಷಣೆ ಮಾಡಿದ್ದರು. ಅದರಂತೆ ಮುಂದಿನ ತಿಂಗಳಿನಿಂದ ಈ ಯೋಜನೆ ಜಾರಿಯಾಗಲಿದೆ. ತುರ್ತು ಇದ್ದಾಗ ಜನರು ಈ ಸೇವೆ ಬಳಸಬಹುದು. ಈ ಕಾರ್ಯಕ್ರಮಕ್ಕೆ ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ” ಎಂದು ಮಾಹಿತಿ ನೀಡಿದರು.
ಹೃದಯಾಘಾತ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನು ಉಳಿಸಬೇಕು. ಗೋಲ್ಡನ್ ಅವರ್ ಒಳಗೆ ಸಕಾಲಕ್ಕೆ ಅವರಿಗೆ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ. ಹೃದಯಾಘಾತ ಆದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗಬೇಕು. ಸರಿಯಾಗಿ ಚಿಕಿತ್ಸೆ ದೊರೆತರೆ ಸಾವಿನ ಪ್ರಮಾಣ ಕಡಿಮೆ ಮಾಡಬಹುದು. ರಾಜ್ಯದ 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸ್ಫೋಕ್ ಕೇಂದ್ರಗಳನ್ನಾಗಿ ರೂಪಿಸುತ್ತಿದ್ದೇವೆ. ಜಯದೇವ ಹೃದ್ರೋಗ ಸಂಸ್ಥೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ ಒಟ್ಟು 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 10 ಹಬ್ಗಳನ್ನು ರಚಿಸಲಾಗಿದೆ” ಎಂದು ಹೇಳಿದರು.
ತುಂಬಾ ಕ್ರಿಟಿಕಲ್ ಹಂತದಲ್ಲಿದ್ದರೆ ಸ್ಪೋಕ್ ಕೇಂದ್ರಗಳಲ್ಲಿ ಉಚಿತವಾಗಿ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಕೊಡಲಾಗುತ್ತದೆ. ಈ ಇಂಜೆಕ್ಷನ್ ಹಠಾತ್ ಹೃದಯಾಘಾತ ಆಗುವುದನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿದೆ. ಹಾಗಾಗಿ, ಕ್ರಿಟಿಕಲ್ ಹಂತದಲ್ಲಿ ಇರುವವರಿಗೆ ತಕ್ಷಣ ಹಾರ್ಟ್ ಅಟ್ಯಾಕ್ ಆಗದಂತೆ ನೋಡಿಕೊಳ್ಳುವಲ್ಲಿ ಈ ಚಿಕಿತ್ಸೆ ಸಹಕಾರಿಯಾಗಲಿದೆ. ನಂತರ ಜಿಲ್ಲಾ ಅಥವಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಬಹುದು” ಎಂದು ವಿವರಿಸಿದರು.