ಬೆಂಗಳೂರು: ಜೂನ್ 12ರಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದಿನಿಂದ ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.
1,11,689 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆಯ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.