ಬೆಂಗಳೂರು: ಯತೀಂದ್ರ ಅವರು ಮಾತನಾಡಿದ್ದು ಸಿಎಸ್ಆರ್ ಫಂಡ್ ಬಗ್ಗೆ ಎಂದು ಸಿಎಂ ಮತ್ತು ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದ CSR ಫಂಡಿದ್ದೋ? ವರುಣ ಕ್ಷೇತ್ರದ್ದೋ? ಎಂದು ಕೇಳಿದ್ದಾರೆ. ಸಿಎಸ್ಆರ್ ಫಂಡ್ ಆಗಿದ್ದರೆ ವರುಣ ಕ್ಷೇತ್ರದ ಬಿಇಓ ಕಳಿಸಿರಬೇಕಲ್ಲ. ಮೈಸೂರು ಡಿಡಿಪಿಐ ಲಿಸ್ಟ್ ಇರಬೇಕಲ್ಲ ಹೊರಗೆ ಇಡಿ ಅದನ್ನ. ಪಾಪ ಸಿಎಂ ಕಚೇರಿಗೆ ಬಂದು ಅದನ್ನ ಮಗನಿಗೆ ಕೇಳಿಕೊಂಡು ಮಾಡಬೇಕಾ? ಇಷ್ಟು ಭಂಡತನ ಬೇಡ. ಹಿಂದೆ ನಿಮ್ಮ ಪ್ರಾಮಾಣಿಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಈಗ ಹಳೆಯ ಸಿದ್ದರಾಮಯ್ಯ ಅಲ್ಲ ಅಂತ ನಿಮ್ಮವರೇ ಹೇಳುತ್ತಿದ್ದಾರೆ ಎಂದರು.