33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನೂತನ 33 ಸಚಿವರಿಗಾಗಿ ಇನ್ನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಅಂತಿರುವ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೇಡೆ ಚರ್ಚೆಗೆ ಗ್ರಾಸವಾಗಿದೆ. ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಹೈಬ್ರೀಡ್ ಕಾರ್ ಖರೀದಿಸಲಾಗಿದೆ. ಅಗಸ್ಟ್ ತಿಂಗಳ 17 ರಂದೇ 33 ಕಾರು ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ದಸರಾ ಆರಂಭವಾಗ್ತಿದ್ದಂತೆ ಎಲ್ಲಾ ಸಚಿವರ ನಿವಾಸಕ್ಕೆ ಕಾರುಗಳು ಬಂದಿವೆ.

Loading

Leave a Reply

Your email address will not be published. Required fields are marked *