ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ  ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ  ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು ನಡೆದಿವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಮೂರು ಠಾಣೆಗಳ ವ್ಯಾಪ್ತಿಯಲ್ಲೇ ಈ ರೀತಿಯ ಗಲಭೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಆ ಮೂರು ಠಾಣೆಗಳಿಗೆ ಸೂಕ್ತ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ. ಪದೇ ಪದೇ ವರ್ಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Loading

Leave a Reply

Your email address will not be published. Required fields are marked *