ಪ್ರಾಧಿಕಾರಗಳ ನಾಮನಿರ್ದೇಶನ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಎಲ್ಲಾ ನಿಗಮ-ಮಂಡಳಿ’ಯ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದುಪಡಿಸಿ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮ ನಿರ್ದೇಶನ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಈ ಹಿನ್ನೆಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧಿಸೂಚನೆ ಹೊರಡಿಸಿದ್ದಾರೆ.

 

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು/ನಿರ್ದೇಶಕರುಗಳ ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ:22.05.2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ಆದೇಶ ಹೊರಡಿಸಲು ಸೂಚಿಸಿದೆ.

ಮುಖ್ಯಮಂತ್ರಿ ಯವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು/ನಿರ್ದೇಶಕರುಗಳು/ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ: 22.05.2023ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ಆದೇಶ ಹೊರಡಿಸಲು ಸೂಚಿಸಿರುತ್ತಾರೆ.

ಮುಖ್ಯಮಂತ್ರಿಯವರ ಆದೇಶದಂತೆ, ತಕ್ಷಣದಿಂದ ಜಾಲಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದ ಅಗತ್ಯ ಅಧಿಸೂಚನೆ/ಆದೇಶವನ್ನು ಕೂಡಲೇ ಹೊರಡಿಸ ಬೇಕಾಗಿ ಸೂಚಿಸಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *