ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಕ್ರಾಂತಿಗೆ ಸಿದ್ಧ: ಸಚಿವ ಮಧು ಬಂಗಾರಪ್ಪ

ಬ್ಯಾಡಗಿ:- ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಕ್ರಾಂತಿಗೆ ಸಿದ್ಧ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕೆಪಿಎಸ್ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಶಿಕ್ಷಕರ ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಸಿದ್ಧವಿದೆ ಎಂದರು.

ಕರ್ನಾಟಕದ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಕದರಮಂಡಲಗಿ ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದವರಿದ್ದಾರೆ. ಅವರೆಲ್ಲರೂ ತಾವು ಕಲಿತ ಶಾಲೆಗೆ ಸಾಧ್ಯವಾದಷ್ಟು ಧನಸಹಾಯ ಮಾಡಿದ್ದೇ ಆದಲ್ಲಿ ಸರ್ಕಾರದ ಹೊರೆ ಇಳಿಸುವುದರ ಜೊತೆಗೆ ದೇಶದಲ್ಲಿಯೇ ರಾಜ್ಯದ ಶಿಕ್ಷಣ ಇಲಾಖೆ ಮಾದರಿಯಾಗಲಿದೆ ಎಂದರು. ಸರ್ಕಾರಿ ಶಾಲೆಗೆ ಸಾರ್ವಜನಿಕರ ಸೇವೆ ಸಣ್ಣ ವಿಷಯವಲ್ಲ. ಗ್ರಾಮದಲ್ಲಿ ₹1 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಹಳೆಯ ವಿದ್ಯಾರ್ಥಿಗಳು ಶಾಲೆಯ ಕಟ್ಟಡವನ್ನು ನಿರ್ಮಿಸಿ ಸರ್ಕಾರಕ್ಕೆ ನೀಡುವ ಮೂಲಕ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *