ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ. 1.28 ಕೋಟಿ ಫಲಾನುಭವಿಗಳ ಪೈಕಿ 1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಸಿ ಅಪ್ಡೇಟ್ ಮಾಡಿಸಿಲ್ಲ ಎಂದರು.

Loading

Leave a Reply

Your email address will not be published. Required fields are marked *