ರಾಜ್ಯದ ನಾಯಕತ್ವ ಎಷ್ಟು ಗಟ್ಟಿಯಾಗಿದೆ ಎಂದು ತೋರಿಸಿಕೊಡಬೇಕಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದ ಜೊತೆಗಿದ್ದೇವೆ. ರಾಜ್ಯ ಸರ್ಕಾರ ರಾಜ್ಯದ ವಾಸ್ತವ ಸ್ಥಿತಿಯನ್ನು ಸುಪ್ರೀಂಕೋರ್ಟ್ ನಲ್ಲಿ ಗಟ್ಟಿಯಾಗಿ ಪ್ರತಿಪಾದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದವರು ಸರ್ವಪಕ್ಷ ಸಬೆ ಕರೆದಿದ್ದರು.

ತಡರಾತ್ರಿ ಆಹ್ವಾನ ಬಂದಿದ್ದರಿಂದ ನನಗೆ ಸಭೆಗೆ ಹೋಗಲು ಆಗಿಲ್ಲ. ನಮ್ಮ ನಿಲಿವು ಸ್ಪಷ್ಟವಾಗಿದೆ, ನಾವು ಈಗಾಗಲೇ 16 ರಿಂದ 17 ಟಿಎಂಸಿ ನೀರು ಹರಿಸಿದ್ದೇವೆ. ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದು ಸಾಧ್ಯವಿಲ್ಲದ ಮಾತು. ನಮಗೆ ಕುಡಿಯುವ ನೀರಿಗೂ ಕೊರತೆಯಿದೆ. ರಾಜ್ಯ ಸರ್ಕಾರ ಸೆ.12 ನೆ ರ ನಂತರ ನೀರು ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಕೊಟ್ಟಿದೆ. ಇದಕ್ಕೆ ರಾಜ್ಯ ಸರಕಾರ ಬದ್ದವಾಗಿರಬೇಕು. ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಗಟ್ಟಿಯಾಗಿ ಪ್ರತಿಪಾದಿಸಬೇಕು ಎಂದು ಹೇಳಿದರು.

ಇನ್ಮು ಮುಂದೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ರಾಜ್ಯ ಸರಕಾರ ಅವತ್ತು ಹೇಳಿತ್ತು, ಆದರೂ ನೀರು ಬಿಟ್ಟಿದ್ದಾರೆ. ಇವತ್ತು ಸರ್ವಪಕ್ಷ ಸಬೆ ಕರೆದಿದ್ದು ನೋಡಿದರೆ, ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಪ್ರತಿಪಾದಿಸಲು ಸಾದ್ಯವಾಗುತ್ತಿಲ್ಲ. ಮತ್ರೆ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ನಾವು ಸರಕಾರದ ಜೊತೆಗಿದ್ದೇವೆ, ಸರಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು. ಈ ಸಂದರ್ಭದಲ್ಲಿ ರಾಜ್ಯದ ನಾಯಕತ್ವ ಎಷ್ಟು ಗಟ್ಟಿಯಾಗಿದೆ ಎಂದು ತೋರಿಸಿಕೊಡಬೇಕಿದೆ ಎಂದು ಹೇಳಿದರು.

Loading

Leave a Reply

Your email address will not be published. Required fields are marked *