ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು. ಹೀಗಾಗಿ ಈದ್ ಮಿಲಾದ್ ಮೆರವಣಿಗೆಗೆ ಇಡೀ ಶಿವಮೊಗ್ಗ ನಗರವನ್ನು ಹಸಿರುಮಯ ಮಾಡಲಾಗಿತ್ತು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು.