ಟೋಕಿಯೊ: ಎಲ್ಲೆಡೆ ಹೊಸ ವರ್ಷದ ಸಂಭ್ರದಲ್ಲಿದ್ದಾರೆ. ಆದ್ರೆ ಹೊಸ ವರ್ಷದ ಆರಂಭದಲ್ಲೇ ಜಪಾನ್‍ಗೆ ತೀವ್ರ ಆಘಾತವಾಗಿದೆ. ಹೌದು ಈಶಾನ್ಯ ಜಪಾನ್‍ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ಗಳಷ್ಟು ಎತ್ತರದ ತೆರೆಗಳು ಅಪ್ಪಳಿಸುತ್ತಿದೆ ಎಂದು ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.