ಶಕ್ತಿ ಯೋಜನೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ನಂತರ ಬಸ್​ಗಳು ರಶ್ ಆಗುತ್ತಿವೆ. ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜಿಗೆ ತೆರಳಲಾಗುತ್ತಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಹೆಚ್ಚಿನ ಬಸ್​ಗಳನ್ನು ಬಿಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Loading

Leave a Reply

Your email address will not be published. Required fields are marked *