ಕಲಬುರಗಿ: ಸೇಡಂ ಮತಕ್ಷೇತ್ರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ರ ಹೆಸರು ಪ್ರಸ್ತಾಪಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಈಗಾಗಲೇ ನಾನು ಮಾಧ್ಯಮದವರಿಗೆ ಈ ಬಗ್ಗೆ ಹೇಳಿದ್ದೇನೆ. ಆ ವ್ಯಕ್ತಿ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮುಖವನ್ನು ನೋಡುತ್ತಿರುವುದು ಇದೇ ಮೊದಲ ಬಾರಿಗೆ. ನನಗೂ ಅದಕ್ಕೂ ಸಂಬಂಧ ಇಲ್ಲ” ಎಂದರು.ಸುಖಾ ಸುಮ್ಮನೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನನಗೆ ಗೊತ್ತಿಲ್ಲ. ಯಾಕೆ ನನ್ನ ಹೆಸರು ಹೇಳಿದ ಎನ್ನುವುದೂ ಗೊತ್ತಿಲ್ಲ. ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ತಿಳಿಸಿದರು.