ರಾಮಮಂದಿರ ಉದ್ಘಾಟನೆಗೆ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಆಹ್ವಾನ!

ಯೋಧ್ಯಯ ರಾಮಮಂದಿರ (Ayodhya Ram Mandir) ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್‌ಗೆ (Rajanikanth) ಆಹ್ವಾನ ನೀಡಲಾಗಿದೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮೋಹನ್ ಲಾಲ್, ಚಿರಂಜೀವಿ, ಕನ್ನಡದ ನಟ ಯಶ್ (Yash), ರಿಷಬ್ ಶೆಟ್ಟಿ (Rishab Shetty), ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

ರಾಮಮಂದಿರದ ಉದ್ಘಾಟನೆ ಸಂಭ್ರಮಕ್ಕೆ ಸಾಕ್ಷಿಯಾಗಲು ವಿಶೇಷವಾಗಿ ರಜನಿಕಾಂತ್ ಅವರಿಗೂ ಆಹ್ವಾನ ಸಿಕ್ಕಿದೆ. ಸದ್ಯ ಈ ಸುದ್ದಿ ಕೇಳಿ ತಲೈವಾ ಅಭಿಮಾನಿಗಳು ಖುಷಿಯಾಗಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದಕ್ಕಾಗಿ ಈಗಾಗಲೇ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ

Loading

Leave a Reply

Your email address will not be published. Required fields are marked *