ಕೊಪ್ಪಳ : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿದ್ದು, ರಾಜ್ಯಾದ್ಯಂತ ಶೇ. 73 ರಷ್ಟು ಮತದಾನವಾಗಿದೆ.
ಈ ನಡುವೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಪಕ್ಷವಾದ ಕೆಆರ್ ಪಿಪಿ ಪಕ್ಷವು ಬೆಂಬಲ ಘೋಷಿಸಲಿದೆ ಎಂದು ಹೇಳಿದ್ದಾರೆ.
ಗಂಗಾವತಿಯಲ್ಲಿ ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ನಂತರ ಕೆಆರ್ ಪಿ ಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಪಕ್ಷ ಬೆಂಬಲಿಸಲು ಕೇಳಿದರೆ, ಸಿದ್ದರಾಮಯ್ಯ ಸಿಎಂ ಆಗುವ ಸಂದರ್ಭ ಇದ್ದರೆ ಖಂಡಿತವಾಗಿ ನಾನು ಅವರಿಗೆ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.