ನಟ ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ (Supreme Court) ನೋಟಿಸ್ ನೀಡಿದೆ. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ (Udhayanidhi Stalin), ಸಿಬಿಐ, ಎ ರಾಜಾ ಮತ್ತು ಇತರ ಪಕ್ಷಗಳಿಗೆ ಕೂಡ ನೋಟಿಸ್ ಜಾರಿಗೊಳಿಸಿ ಕೋರ್ಟ್ ಪ್ರತಿಕ್ರಿಯೆ ಕೇಳಿದೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ಈ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯಲ್ಲಿ ಒಟ್ಟು 14 ಕಕ್ಷಿದಾರರನ್ನು ಸೇರಿಸಲಾಗಿದೆ. ಇವುಗಳಲ್ಲಿ ತಮಿಳುನಾಡು ಸರ್ಕಾರದ ವಿವಿಧ ಇಲಾಖೆಗಳು, ಡಿಜಿಪಿ, ಪೊಲೀಸ್ ಕಮಿಷನರ್, ಸಿಬಿಐ ಮತ್ತು ಇತರರು ಸೇರಿದ್ದಾರೆ.

ತಮಿಳುನಾಡು (Tamilnadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೇಗೆ ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.

Loading

Leave a Reply

Your email address will not be published. Required fields are marked *