ತಮಿಳು ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ,

ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.

 

Loading

Leave a Reply

Your email address will not be published. Required fields are marked *