ಮಡಿಕೇರಿ: ಸಚಿವ ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಿ ಹಾಕಲು, ಮಾಧ್ಯಮಗಳ ಗಮನ ಬೇರೆಡೆ ಸೆಳೆದು ವಿಷಯಾಂತರ ಮಾಡಲು ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಲಾಯಿತು ಎಂದು ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ‘ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದೀರ.
ಕೋರ್ಟಿನಲ್ಲಿ ಜಡ್ಜ್ ನಿಮಗೆ ಮಂಗಳಾರತಿ ಮಾಡಿದ್ದಾರೆ’ ಎಂದು ಪ್ರತಾಪ್, ಗೃಹ ಸಚಿವ ಪರಮೇಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ.
ವಿಕ್ರಂ ಸಿಂಹ ಬಂಧನ ವಿಷಯದಲ್ಲಿ ಪ್ರತಾಪ್ ರಾಜಕಾರಣ ಮಾಡುತ್ತಿದ್ದಾರೆ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ, ‘ನನಗೆ ಪರಮೇಶ್ವರ್ ಸಾಹೇಬರ ಬಗ್ಗೆ ಅಪಾರವಾದ ಗೌರವವಿದೆ. ಆ ಎಫ್ಐಆರ್ನಲ್ಲಿ ನನ್ನ ತಮ್ಮನ ಹೆಸರಿಲ್ಲದಿದ್ದರೂ ಸುಖಾಸುಮ್ಮನೆ ಈ ವಿಚಾರದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್’ ಎಂದಿದ್ದಾರೆ.
ಇನ್ನು, ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ಚುನಾವಣೆಯಲ್ಲಿ ಕೊಡಗು-ಮೈಸೂರಲ್ಲಿ ನನ್ನ ವಿರುದ್ಧ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ ಅಂತ ಗೊತ್ತಿದೆ. ಹಾಗಾಗಿ ನನ್ನನ್ನು, ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದೂ ಕಿಡಿ ಕಾರಿದ್ದಾರೆ.