ಹೊಸ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್‌ ಬುಮ್ರಾ

ವಿಶಾಖಪಟ್ಟಣಂ: ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್‌ ಸರಣಿಯ 2ನೇ ಪಂದ್ಯದಲ್ಲಿ ಮಾರಕ ಬೌಲಿಂಗ್‌ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ 6 ವಿಕೆಟ್‌ ಪಡೆದಿದ್ದ ಬುಮ್ರಾ, 2ನೇ ಪಂದ್ಯದಲ್ಲಿ 9 ವಿಕೆಟ್‌ಗಳನ್ನ ಉರುಳಿಸಿ ಐಸಿಸಿ ರ‍್ಯಾಂಕಿಂಗ್‌ನಲ್ಲಿ (ICC Test Rankings) ನಂ.1 ಸ್ಥಾನಕ್ಕೇರಿದ್ದಾರೆ. ಈ ಮೂಲಕ ದೇಶದ ಇತಿಹಾಸದಲ್ಲೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 15.5 ಓವರ್‌ಗಳಲ್ಲಿ 45 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದಿದ್ದ ಬುಮ್ರಾ, 2ನೇ ಇನ್ನಿಂಗ್ಸ್‌ನಲ್ಲಿ 17.2 ಓವರ್‌ಗಳಲ್ಲಿ 3 ವಿಕೆಟ್‌ ಪಡೆದು ಮಿಂಚಿದ್ದಾರೆ. ಈ ಮೂಲಕ 881 ಶ್ರೇಯಾಂಕಗಳೊಂದಿಗೆ ನಂ.1 ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ರವಿಚಂದ್ರನ್‌ ಅಶ್ವಿನ್‌ (Ashwin), ರವೀಂದ್ರ ಜಡೇಜಾ ಹಾಗೂ ಬಿಷೆನ್‌ ಸಿಂಗ್‌ ಬೇಡಿ ಈ ಹಿಂದೆ ಅಗ್ರಸ್ಥಾನಕ್ಕೇರಿದ್ದರು.

ಬುಮ್ರಾ ಕಳೆದ 34 ಟೆಸ್ಟ್‌ ಪಂದ್ಯಗಳಿಂದ 15 ವಿಕೆಟ್‌ ಪಡೆದಿದ್ದರೂ 3ನೇ ಸ್ಥಾನಕ್ಕಿಂತ ಹೆಚ್ಚು ಮೇಲಕ್ಕೇರಲು ಸಾಧ್ಯವಾಗಿರಲಿಲ್ಲ. ಆದರೀಗ ಇಂಗ್ಲೆಂಡ್‌ (England) ವಿರುದ್ಧದ ಪ್ರದರ್ಶನದಿಂದಾಗಿ ಆರ್‌. ಅಶ್ವಿನ್‌ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ತನ್ನದಾಗಿಸಿಕೊಂಡಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್‌ ಬೌಲಿಂಗ್‌ ರ‍್ಯಾಂಕಿಂಗ್‌ನಲ್ಲಿ 665 ಶ್ರೇಯಾಂಕದೊಂದಿಗೆ 6ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *