World cup: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ

ಚೆನ್ನೈ: ಟೀಂ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (Virat kohli) ಮತ್ತು ಕೆ.ಎಲ್ ರಾಹುಲ್ (KL Rahul) ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ (Team India), ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ಗಳ ಅಮೋಘ ಜಯ ಸಾಧಿಸಿದೆ.
ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

ಆಸೀಸ್ ನೀಡಿದ 200 ರನ್ಗಳ ಗುರಿ ಬೆನ್ನತ್ತಿದ್ದ ಭಾರತ 41.2 ಓವರ್ನಲ್ಲೇ 4 ವಿಕೆಟ್ ನಷ್ಟಕ್ಕೆ 201 ರನ್ ಬಾರಿಸಿ ಗೆಲುವು ಸಾಧಿಸಿದೆ.ಚೇಸಿಂಗ್ ಆರಂಭಿಸಿದ ಭಾರತ 2ನೇ ಓವರ್ನಲ್ಲೇ ಕೇವಲ 2 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟ ಅನುಭವಿಸಿತ್ತು. ಇದರಿಂದ 4ನೇ ವಿಕೆಟ್ಗೆ ಜೊತೆಯಾದ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಜೋಡಿ ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿತ್ತು. 15 ಓವರ್ ಪೂರ್ಣಗೊಂಡರೂ ಭಾರತ 49 ರನ್ ಗಳಿಸಿದ್ದರಿಂದ ಗೆಲವು ಅಸಾಧ್ಯವೆಂದೇ ಭಾವಿಸಲಾಗಿತ್ತು.

ಬಳಿಕ ಸಮಯೋಚಿತ ಬ್ಯಾಟಿಂಗ್ ನಿಂದ ಒಂದೊಂದೇ ಬೌಂಡರಿಗಳನ್ನ ಸಿಡಿಸುತ್ತಾ ತಂಡವನ್ನು ಗೆಲುವಿನ ಹಾದಿಯತ್ತ ಮುನ್ನಡೆಸಿದರುಇವರಿಬ್ಬರ ಜೊತೆಯಾಟದಿಂದ ಭಾರತ 35 ಓವರ್ಗಳಲ್ಲಿ 151 ರನ್ ಬಾರಿಸಿತ್ತು. 4ನೇ ವಿಕೆಟ್ಗೆ ಕೆ.ಎಲ್ ರಾಹುಲ್ ಹಾಗೂ ಕೊಹ್ಲಿ 215 ಎಸೆತಗಳಲ್ಲಿ 165 ರನ್ಗಳ ಜೊತೆಯಾಟ ನೀಡಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 85 ರನ್ ಚಚ್ಚಿ ಶತಕ ವಂಚಿರಾದರು. ಇನ್ನೂ ಕೊನೆಯವರೆಗೂ ಹೋರಾಡಿದ ಕೆ.ಎಲ್ ರಾಹುಲ್ 115 ಎಸೆತಗಳಲ್ಲಿ 97 ರನ್ (8 ಬೌಂಡರಿ, 2 ಸಿಕ್ಸರ್) ಚಚ್ಚಿ ಅಜೇರಾಗುಳಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 11 ರನ್ ಕೊಡುಗೆ ನೀಡಿದರು.

Loading

Leave a Reply

Your email address will not be published. Required fields are marked *