ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್ ಸೌ ಪಾರ್: ಬಿಜೆಪಿ ಉದ್ಘೋಷ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ (LokSabha Election) ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್‌ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ ಬಳಿಕ ಈ ಘೋಷಣೆಗಳನ್ನು ಅಂತಿಮಗೊಳಿಸಲಾಯಿತು. ಸಭೆಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಉಪಸ್ಥಿತರಿದ್ದರು.

ಶೀಘ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಹಂತಗಳಲ್ಲಿ ಬಿಜೆಪಿ ಸಂಚಾಲಕರು ಮತ್ತು ಸಹ ಸಂಚಾಲಕರನ್ನು ನೇಮಕ ಮಾಡಲು ನಿರ್ಧರಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಭೇಟಿ ಕ್ಲಸ್ಟರ್‌ಗಳ ಮಟ್ಟದಲ್ಲಿ ಆರಂಭಸಲಾಗುತ್ತದೆ. ಸಭೆಯಲ್ಲಿ 150ಕ್ಕೂ ಹೆಚ್ಚು ಮುಖಂಡರು ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂದೆ ಏನಿತ್ತು?
2014- ಅಚ್ಛೇದಿನ್‌ ಆನೇ ವಾಲೆ ಹೈ (ಒಳ್ಳೆಯ ದಿನಗಳು ಬರಲಿವೆ)
2019 – ಫಿರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌ (ಮತ್ತೊಂದು ಬಾರಿ ಮೋದಿ ಸರ್ಕಾರ್‌)

 

Loading

Leave a Reply

Your email address will not be published. Required fields are marked *