ಬೆಂಗಳೂರು: ನಗರದ ಕೆಆರ್ ಮಾರ್ಕೆಟ್ ಫ್ಲೈಓವರ್ ಮೇಲೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗಜ್ಜಾಗಿದೆ. ಆಟೋ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಟೋ ಟೌನ್ಹಾಲ್ ಕಡೆಯಿಂದ ಸ್ಯಾಟ್ಲೈಟ್ ಕಡೆಗೆ ಹೊರಟಿತ್ತು. ಹಿಂಬದಿಯಿಂದ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಾಳುಗಳು ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಕಾರ್ ಚಾಲಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.