ಮೆಕ್ಸಿಕೋದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್

ಕ್ಸಾಕ: ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 27 ಮಂದಿ ಸಾವನ್ನಪ್ಪಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.

ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಸ್ಯಾಂಟಿಯಾಗೊ ಡಿ ಯೊಸೊಂಡುವಾಗೆ ತೆರಳುತ್ತಿತ್ತು ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.

ಪರಿಣಾಮ 27 ಮಂದಿ ಸಾವನ್ನಪ್ಪಿ, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, 17 ಮಂದಿಯ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *