ಇಸ್ಲಾಮಾಬಾದ್: ಸ್ವಾತಂತ್ರ್ಯ ದಿನದ ಮುಂಚಿನ ದಿನವಾದ ಇಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಚೀನಾದ ಇಂಜಿನಿಯರ್ಗಳ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 4 ಚೀನಾ ಪ್ರಜೆಗಳು ಹಾಗೂ 9 ಪಾಕ್ ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ವೇಳೆ ಪಾಕಿಸ್ತಾನದ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚೀನಾದ ಕಂಪನಿಯೊಂದರ ಇಂಜಿನಿಯರ್ಗಳು ಪಾಕ್ನ ಗ್ವಾದರ್ ಬಳಿಯ ಫಕೀರ್ ಸೇತುವೆಯ ಬಳಿ ಕೆಲಸ ನಿರ್ವಹಿಸುವ ಸ್ಥಳಕ್ಕೆ ತೆರಳುವ ವೇಳೆ ಈ ದಾಳಿಯಾಗಿದೆ. ದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಬಂದರು ನಗರವಾದ ಗ್ವಾದರ್ನಾದ್ಯಂತ ಸ್ಫೋಟಗಳು ಮತ್ತು ಗುಂಡಿನ ಸದ್ದು ಕೇಳಿಬರುತ್ತಿದೆ.