ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್(Mann Ki Baat)’ ನ 101 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ತಿಂಗಳ ಆರಂಭದಲ್ಲಿ, ಇಂದು ನಡೆಯುವ ಸಂಚಿಕೆಗೆ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಪ್ರಧಾನಿ ಜನರನ್ನು ಆಹ್ವಾನಿಸಿದ್ದಾರೆ.
‘ಮನ್ ಕಿ ಬಾತ್’ ಕಾರ್ಯಕ್ರಮದ 100 ನೇ ಆವೃತ್ತಿಯು ಏಪ್ರಿಲ್ 30 ರಂದು ಪ್ರಸಾರವಾಗಿತ್ತು. ಕಾರ್ಯಕ್ರಮವನ್ನು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ ಮಾಡಲಾಯಿತು.
22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ಮನ್ ಕಿ ಬಾತ್ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ದರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ.
ಆಕಾಶವಾಣಿಯ 500ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳಿಂದ ಮನ್ ಕಿ ಬಾತ್ ಪ್ರಸಾರವಾಗುತ್ತಿದೆ. 100 ಕೋಟಿಗೂ ಹೆಚ್ಚು ಜನರು ಒಮ್ಮೆಯಾದರೂ ಮನ್ ಕಿ ಬಾತ್ ಅನ್ನು ಆಲಿಸಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರದಂದು ಮನ್ ಕಿ ಬಾತ್ ಪ್ರಸಾರವಾಗುತ್ತದೆ.