ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 22ರಂದು ರಾಮನೂರಿನಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ದಿನಕ್ಕಾಗಿ ದೇಶಾದ್ಯಂತ ಜನ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಅಲ್ಲದೆ ಈ ದಿನ ರಜೆ ನೀಡಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು.  ಇದೀಗ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗುವುದು.

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಕೂಡ ಭಾಗವಹಿಸಬೇಕು ಎಂಬ ಕಾರಣಕ್ಕೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

Loading

Leave a Reply

Your email address will not be published. Required fields are marked *