ದೌರ್ಜನ್ಯಗಳ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ: ಸ್ಮೃತಿ ಇರಾನಿ ಪ್ರಶ್ನೆ

ನವದೆಹಲಿ ;-ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಮಾತನಾಡಲು ವಿಪಕ್ಷಗಳಿಗೆ ಯಾವಾಗ ಧೈರ್ಯ ಬರುತ್ತದೆ ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ನ ಆಮೀ ಯಾಗ್ನಿಕ್ ಮಣಿಪುರದಲ್ಲಿನ ಘರ್ಷಣೆ ಕುರಿತು ಮಹಿಳಾ ಸಚಿವೆಯರು ಯಾಕೆ ತಮ್ಮ ಧ್ವನಿಯನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಸಚಿವೆ ಸ್ಮೃತಿ ಇರಾನಿ ಮಹಿಳಾ ಸಚಿವರು ಹಾಗೂ ರಾಜಕಾರಣಿಗಳು ಮಣಿಪುರ, ಛತ್ತೀಸ್ಗಢ, ಬಿಹಾರ, ರಾಜಸ್ಥಾನದ ಬಗ್ಗೆಯೂ ಸಹ ಮಾತನಾಡುತ್ತಾರೆ. ಮಣಿಪುರ ಹೊರತುಪಡಿಸಿ ಈ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Loading

Leave a Reply

Your email address will not be published. Required fields are marked *