ಚಿತ್ರದುರ್ಗ: ಚಾಲಕನ ನಿತಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ ಹೊಂದಿದ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿನಡೆದಿದೆ. ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವರೆಲ್ಲರೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು,
ಕೆಲಸಕ್ಕಾಗಿ ಬೆಂಗಳೂರಿನತ್ತ ಪಯಣ ಬೆಳೆಸಿದ್ದರು. ಒಂದೇ ಕುಟುಂಬದ ಕಾರ್ಮಿಕರಾಗಿದ್ದು, ತಮ್ಮ ಮಕ್ಕಳ ಸಹಿತ ಕಾರಲ್ಲಿ ಹೊರಟಿದ್ದರು. ಬೆಳಗ್ಗಿನ ಜಾವ ನಿದ್ರೆ ಮಂಪರಿನಲ್ಲಿದ್ದ ಕಾರಿನ ಚಾಲಕ ರಸ್ತೆ ಬದಿಯಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.