ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟವ ಯೋಗ್ಯತೆ ಸರ್ಕಾರಕ್ಕೆ ಇಲ್ಲ : ಆರ್​.ಅಶೋಕ್ ಕಿಡಿ!

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟವ ಯೋಗ್ಯತೆ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಆರ್​.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು’ಎಕ್ಸ್​’ನಲ್ಲಿ ಬರೆದುಕೊಂಡಿರುವ ಅವರು, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ.

ಇನ್ನೂ ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರವಾಗಿದೆ.

ಬಡವರ ಪಾಲಿನ ಆಸರೆಯಾದ ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ನಿಮ್ಮ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಸಿಎಂ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳಿದ್ದು, 19,802 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಸ್ವಂತ ಕಟ್ಟಡ ಇಲ್ಲದ ಅಂಗನವಾಡಿಗಳಿಗೆ ಗ್ರಾಮ ಪಂಚಾಯಿತಿ ಇಲ್ಲವೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ಒದಗಿಸಲಾಗಿದೆ ಎಂದರು.

Loading

Leave a Reply

Your email address will not be published. Required fields are marked *