ಶಿವಮೊಗ್ಗ: ಶಿವಮೊಗ್ಗದಲ್ಲಿ ಆದ ಘಟನೆ ಖಂಡಿಸುತ್ತೇನೆ. ಸರ್ಕಾರ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಕೆಲಸ ಸರ್ಕಾರ ಮಾಡುತ್ತಿದೆ. ಮುಂದೆ ಈ ರೀತಿ ಅಹಿತಕರ ಘಟನೆ ಆಗದಂತೆ ಸರ್ಕಾರ ಕ್ರಮಕೈಗೊಳ್ಳತ್ತೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಬೋಸರಾಜ್ ಹೇಳಿದ್ದಾರೆ.
ಇನ್ನೂ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ, ಶಾಂತಿನಗರದಲ್ಲಿ ಪೊಲೀಸ್ ಹೈಅಲರ್ಟ್ ಆಗಿದ್ದಾರೆ. ಶಾಂತಿನಗರದ ಮುಖ್ಯ ರಸ್ತೆಯಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್ ಸವಾರ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.