ತುಮಕೂರು : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಬರೋದು ನಿಶ್ಚಿತ, ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ, ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ.
ಶಾಸಕಾಂಗ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆದು ಮುಖ್ಯಮಂತ್ರಿ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
2013 ರಲ್ಲಿ ನಾನು 120 ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದೆ. ಆದರೆ ಕಾಂಗ್ರೆಸ್ 122 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಿತ್ತು. ಈ ಬಾರಿಯ ಚುನಾವಣೆಯಲ್ಲಿ 130 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೇನೆ. ನನ್ನ ಲೆಕ್ಕಚಾರ ಸರಿ ಆಗಬಹುದು ಎಂದರು.
ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ. ವರುಣದಲ್ಲಿ ಯಾವುದೇ ತೊಂದರೆ ಇಲ್ಲದೆ ಸಿದ್ದರಾಮಯ್ಯ ಅವರು ಗೆಲ್ತಾರೆ ಎಂದು ಹೇಳಿದ್ದಾರೆ.