ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿದರು. ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಬಹುದು.
ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ ನಡೆದಿದೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ಚರ್ಚೆ ಆಗಿದೆ. ಅಭ್ಯರ್ಥಿ ಆಯ್ಕೆಗೆ ಮಾನದಂಡಗಳೇನು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದರು.