ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿ ಪ್ರದೇಶದಲ್ಲಿ ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮಂಜುಳಾ ಕೊಲೆಯಾದ ಮಹಿಳೆ. ಪತ್ನಿ ಕೊಂದು ಪತಿ ಭೀಮಪ್ಪ ಮುತ್ತಲಗಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.