ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡ ಉದ್ಘಾಟನೆಯು ನಮ್ಮ ಹೆಮ್ಮೆಯ ಪ್ರತೀಕವಾಗಿದೆ. ನಮ್ಮ ಹೃದಯ, ಮನಸ್ಸುಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.
ಇಂದು ನೂತನ ಸಂಸತ್ ಕಟ್ಟಡ ಉದ್ಘಾಟನೆಯ ಬಳಿಕ ಟ್ವಿಟ್ ಮಾಡಿರುವಂತ ಅವರು, ಭಾರತದ ಸಂಸತ್ತಿನ ಹೊಸ ಕಟ್ಟಡವನ್ನು ಉದ್ಘಾಟಿಸುತ್ತಿದ್ದಂತೆ, ನಮ್ಮ ಹೃದಯ, ಮನಸ್ಸು ಹೆಮ್ಮೆ ಮತ್ತು ಭರವಸೆಯಿಂದ ತುಂಬಿದೆ.
ಈ ಐತಿಹಾಸಿಕ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಲಿದೆ. ನಮ್ಮ ಕನಸುಗಳನ್ನು ವಾಸ್ತವಕ್ಕೆ ತರಲು ಕೆಲಸ ಮಾಡಲಿದೆ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ತಿಳಿಸಿದ್ದಾರೆ.