ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ಅಲ್ಪ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿಧಾನಸಭಾ ಚುನಾವಣೆಯಲ್ಲಿ ಆರಂಭದಲ್ಲಿ ಗೆಲುವು ಕಂಡಿದ್ದರು. ಆ ಬಳಿಕ ಮರು ಮತಎಣಿಕೆ ವೇಳೆ 17 ಮತಗಳಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ಕಂಡಿದ್ದರು.
ಈ ಬೆನ್ನಲ್ಲೇ ಮಾಲೂರು ಕ್ಷೇತ್ರದಲ್ಲಿ 248 ಮತಗಳ ಅಂತರದಿಂದ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಮರುಮತಎಣಿಕೆಗೆ ನಿರ್ದೇಶನ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾಲೂರು ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಂಜುನಾಥ್ ಹಾಗೂ ಕಾಂಗ್ರೆಸ್ ನ ನಂಜೇಗೌಡ ನಡುವೆ ತೀವ್ರ ಜಿದ್ದಾಜಿದ್ದು ನಡೆದಿತ್ತು. ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ 248 ಅಲ್ಪ ಮತಗಳ ಅಂತರದಿಂದ ಗೆಲುವು ಕಂಡಿದ್ದರು. ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಣೆ ಕೂಡ ಮಾಡಿತ್ತು.
ಇದೀಗ ಸೋತಿದ್ದಂತ ಬಿಜೆಪಿಯ ಮಂಜುನಾಥ್ ಮಾಲೂರು ಕ್ಷೇತ್ರದಲ್ಲಿನ ಮರುಮತಎಣಿಕೆಗೆ ನಿರ್ದೇಶ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಾಲೂಕು ಕ್ಷೇತ್ರದ ಚುನಾವಣೆಯಲ್ಲಿ ನಡೆದಂತ ಮತದಾನದ ಮತಗಳನ್ನು ಮರುಎಣಿಕೆಗೆ ನಿರ್ದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಹೈಕೋರ್ಟ್ ಯಾವ ನಿರ್ದೇಶವನ್ನು ನೀಡುತ್ತದೆ ಎಂಬುದನ್ನು ಅರ್ಜಿಯ ವಿಚಾರಣೆಯ ಬಳಿಕ ತಿಳಿಯಲಿದೆ.